ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿನಿಯೊಬ್ಬರು ಬಲಿಯಾಗಿರುವ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಅಪಘಾತ ಸಂಭವಿಸಿದೆ. ಬಿಎಂಟಿಸಿ ಬಸ್ ಚಾಲಕನ ಎಡವಟ್ಟಿನಿಂದಾಗಿ ಸರಣಿ ಅಪಘಾತವಾಗಿರುವ ಘಟನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದೆ.
ಬಿಎಂಟಿಸಿ ಬಸ್ ಚಾಲಕ ಏಕಾಏಕಿ ಬಸ್ ನುಗ್ಗಿಸಿದ ಪರಿಣಾಮ ಕಾರು ಹಾಗೂ ಆಟೋ, ಬೈಕ್ ಸೇರಿ 9 ವಾಹನಗಳು ಡಿಕ್ಕಿಯಾಗಿವೆ. ಬಸ್ ಚಾಲಕನ ಅವಾಂತರಕ್ಕೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಿಎಂಟಿಸಿ ಬಸ್ ಚಾಲಕನ ಬೇಜವಾಬ್ದಾರಿಗೆ ಸಾರ್ವಜನಿಕರು ಕಿಡಿಕಾರಿದ್ದಾರೆ. ಸ್ಥಳದಲ್ಲಿ ಪೊಲೀಸರು ಬೀಡುಬಿಟ್ಟಿದ್ದು, ವಾಹನಗಳನ್ನು ತೆರವು ಮಾಡುತ್ತಿದ್ದಾರೆ.