HomeKarnatakaBMTC ಬಸ್-ಬೈಕ್ ಭೀಕರ ಅಪಘಾತ: ಮೂವರ ಸ್ಥಿತಿ ಗಂಭೀರ

BMTC ಬಸ್-ಬೈಕ್ ಭೀಕರ ಅಪಘಾತ: ಮೂವರ ಸ್ಥಿತಿ ಗಂಭೀರ

ಬೆಂಗಳೂರು: ಬಿಎಂಟಿಸಿ ಬಸ್ ಹಾಗೂ ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆ.ಆರ್.ಮಾರುಕಟ್ಟೆ ಬಳಿ ನಡೆದಿದೆ.

ಕೆ.ಆರ್.ಮಾರುಕಟ್ಟೆ ಫೈಓವರ್ ಮೇಲೆ ಈ ಅಪಘಾತ ಸಂಭವಿಸಿದೆ. ಬಸ್ ಗೆ ಬೈಕ್ ವೊಂದು ಡಿಕ್ಕಿಹೊಡೆದು ಬಸ್ ಕೆಳಗೆ ಸಿಲುಕಿದೆ. ಇದೇ ವೇಳೆ ಬಂದ ಮತ್ತೊಂದು ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.

ಬೈಕ್ ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular