ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪೀಣ್ಯದಲ್ಲಿ ನಡೆದಿದೆ.
ಪೀಣ್ಯ ಎರಡನೇ ಹಂತದಲ್ಲಿ ಇಂದು ಬೆಳಿಗ್ಗೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಫುಟ್ಪಾತ್ ಮೇಲೆ ನಿಂತಿದ್ದ ಐವರ ಮೇಲೆ ಹರಿದು ಹೋಗಿತ್ತು. ಬಳಿಕ ಕ್ಯಾಂಟಿನ್ ಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಮಹಿಳೆ, ಮಗು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗಾಯಾಳು ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸುಮಾ (25) ಮೃತ ಮಹಿಳೆ. ಮೃತ ಸುಮಾ ಹೆಚ್.ಡಿ.ಎಫ್. ಸಿ ಬ್ಯಾಂಕ್ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.