BREAKING: ಬಿಎಂಟಿಸಿ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ಬೈಕ್ ಸವಾರನ ತಲೆ ನುಜ್ಜುಗುಜ್ಜು

ಬೆಂಗಳೂರು: ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರನ ತಲೆ ನುಜ್ಜುಗುಜ್ಜಾಗಿರುವ ಘಟನೆ ಹೆಬ್ಬಾಳದಲ್ಲಿ ನಡೆದಿದೆ.

ಹೆಬ್ಬಾಳದ ಕಲ್ಯಾಣಗರ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ಗಂಡ-ಹೆಂಡತಿ ಹಾಗೂ ಮಕ್ಕಳು ತೆರಳುತ್ತಿದ್ದರು. ಈ ವೇಳೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರನ ಮೇಲೆಯೇ ಹರಿದು ಹೋಗಿದೆ.

ಘಟನೆಯಲ್ಲಿ ಬೈಕ್ ಸವಾರನ ತಲೆ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ.

TAGGED:
Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read