HomeKarnatakaBIG NEWS: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಕೆಳಗೆಬಿದ್ದ ಮಹಿಳೆ ಮೇಲೆ ಹರಿದ ಕಾರು: ಸ್ಥಳದಲ್ಲೇ ದುರ್ಮರಣ

BIG NEWS: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಕೆಳಗೆಬಿದ್ದ ಮಹಿಳೆ ಮೇಲೆ ಹರಿದ ಕಾರು: ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಸ್ಕೂಟರ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಮಹಿಳೆಯ ಮೇಲೆಯೇ ಕಾರೊಂದು ಹರಿದು ಹೋಗಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆಂಗೇರಿಯ ಉಲ್ಲಾಳ ಬಳಿ ನಡೆದಿದೆ.

25 ವರ್ಷದ ಮೋನಿಕಾ ಮೃತ ಮಹಿಳೆ. ಸೊನ್ನೇನಹಳ್ಳಿಯ ಮಾರುತಿ ನಗರದ ನಿವಾಸಿ. ಉಲ್ಲಾಳ ಬಳಿಯ ರಿಂಗ್ ರಸ್ತೆಯಲ್ಲಿನ ಶೋ ರೂಂ ಒಂದರಲ್ಲಿ ಹೆಚ್.ಆರ್ ಆಗಿ ಕೆಲಸ ಮಾಡುತ್ತಿದ್ದ ಮೋನಿಕಾ ಎಂದಿನಂತೆ ತಮ್ಮ ಸ್ಕೂಟರ್ ನಲ್ಲಿ ಆಫೀಸ್ ಗೆ ತೆರಳುತ್ತಿದ್ದರು. ಈ ವೇಳೆ ಬಿಎಂಟಿಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದು, ರಸ್ತೆಗೆ ಬಿದ್ದ ಮೋನಿಕಾ ಅವರ ಮೇಲೆಯೇ ಹಿಂದಿನಿಂದ ಬಂದ ಕಾರು ಹರಿದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಮೋನಿಕಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ಕಾಮಗಾರಿ ನಡೆಯುತ್ತಿದುದರಿಂದ ಒಂದೇ ಬದಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular