BMTC ಬಸ್ ಚಾಲಕನಿಂದ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕರೊಬ್ಬರು ಹೆದ್ದಾರಿ ಬದಿ ಬಸ್ ನಿಲ್ಲಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ.

ನಂಜುಂಡಯ್ಯ ಆತ್ಮಹತ್ಯೆಗೆ ಯತ್ನಿಸಿದ ಬಸ್ ಚಾಲಕ. ಹಿರಿಯ ಅದಿಕಾರಿಗಳ ಕಿರುಕುಳಕ್ಕೆ ನೊಂದು ನಂಜುಂಡಯ್ಯ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಹೊಸಕೋಟೆ ಹೊರವಲಯದ ಟೋಲ್ ಫ್ಲಾಜಾ ಬಳಿ ಬಸ್ ನಿಲ್ಲಿಸಿ ಅಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಸಹೋದ್ಯೋಗಿ ಹಾಗೂ ಸ್ಥಳೀಯರು ಕೂಡಲೇ ಬಸ್ ಚಾಲಕನನ್ನು ರಕ್ಷಿಸಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಹೊಸಕೋಟೆ ಪೊಲೀಸರು ಬಸ್ ಚಾಲಕನನ್ನು ಮನವೊಲಿಸಿ ಅಧಿಕಾರಿಗಳ ಜೊತೆ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read