ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಮತ್ತೀರ್ವರನ್ನು ಬಲಿ ಪಡೆದಿದೆ. 9 ವರ್ಷದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪಿರುವ ಘಟನೆ ನಡೆದಿದೆ.
ರಾಜಾಜಿನಗರದ 1ನೇ ಬ್ಲಾಕ್ ನಲ್ಲಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಬಸ್ ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿನಿಯ ಮೇಲೆಯೇ ಬಸ್ ಹರಿದಿದೆ. ಬಸ್ ಚಕ್ರದಡಿ ಸಿಲುಕಿದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಘಟನಾ ಸ್ಥಳಕ್ಕೆ ಧಾವಿಸಿರುವ ಸಾರ್ವಜನಿಕರು ಬಸ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.