HomeLatest NewsBREAKING: ಕಿಲ್ಲರ್ BMTCಗೆ ಮತ್ತೊಂದು ಬಲಿ: ಬೈಕ್ ನಿಂದ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಬಸ್:...

BREAKING: ಕಿಲ್ಲರ್ BMTCಗೆ ಮತ್ತೊಂದು ಬಲಿ: ಬೈಕ್ ನಿಂದ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಬಸ್: ಬಾಲಕಿ ಸ್ಥಳದಲ್ಲೇ ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಅಟ್ಟಹಾಸಕ್ಕೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆಯೇ ಬಸ್ ಹರಿದು ಹೋಗಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಯಲಹಂಕದ ಕೋಗಿಲು ಕ್ರಾಸ್ ಬಳಿಯ ಮಾರುತಿ ನಗರದಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ 11 ವರ್ಷದ ಬಾಲಕಿ ತನ್ವಿಕೃಷ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ತನ್ವಿಕೃಷ್ಣ ಖಾಸಗಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೈಕ್ ಸ್ಕಿಡ್ ಆಗಿ ಬಾಲಕಿ ತನ್ವಿಕೃಷ್ಣ ಕೆಳಗೆ ಬಿದ್ದಿದ್ದಾಳೆ. ಕೆಳಗೆ ಬಿದ್ದ ಬಾಲಕಿ ಮೇಲೆಯೇ ಬಿಎಂಟಿಸಿ ಬಸ್ ಹರಿದಿದೆ. ಬಸ್ ಚಕ್ರಕ್ಕೆ ಸಿಲುಕಿ ಬಾಲಕಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular