ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗೆ ಮತ್ತೊಂದು ಬಲಿಯಾಗಿದೆ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿ ಮೇಲೆಯೇ ಬಿಎಂಟಿಸಿ ಬಸ್ ಹರಿದು ಹೋಗಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಜ್ಞಾನಭಾರತಿ ವ್ಯಾಪ್ತಿಯ ಮಂಗನಹಳ್ಳಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ರಾಜು (58) ಮೃತ ದುರ್ದೈವಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಬೆಳ್ಳಂ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಬಿಎಂಟಿಸಿ ಬಸ್ ಗೆ ಬಲಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

