HomeKarnatakaBREAKING: ರಸ್ತೆ ದಾಟುತ್ತಿದ್ದ ಮಹಿಳೆಗೆ ಬಿಎಂಟಿಸಿ ಬಸ್ ಡಿಕ್ಕಿ: ಬಸ್ ನಡಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ...

BREAKING: ರಸ್ತೆ ದಾಟುತ್ತಿದ್ದ ಮಹಿಳೆಗೆ ಬಿಎಂಟಿಸಿ ಬಸ್ ಡಿಕ್ಕಿ: ಬಸ್ ನಡಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಸ್ಥಳೀಯರು

ಬೆಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಮಹಿಳೆ ಬಸ್ ನಡಿ ಸಿಲುಕಿ ಪರದಾಡಿದ್ದಾರೆ.

ಬೆಂಗಳೂರಿನ ಇಂದಿರಾನಗರದಲ್ಲಿ ಈ ಘಟನೆ ನಡೆದಿದೆ. ರಸ್ತೆ ದಾಟುತ್ತಿದ್ದ ಮಹಿಳೆಗೆ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಮಹಿಳೆ ಬಸ್ ನ ಅಡಿಗೆ ಸಿಲುಕಿಕೊಂಡು ರಕ್ಷಣೆಗಾಗಿ ಮೊರೆ ಇಟ್ಟಿದ್ದಾರೆ. ಮಹಿಳೆಗೆ ಬಸ್ ಡಿಕ್ಕಿ ಹೊಡೆಯುತ್ತಿದ್ದಂತೆ ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾನೆ. ಅದೃಷ್ಟವಶಾತ್ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸ್ ನ ಅಡಿಯಲ್ಲಿ ಸಿಲುಕಿ ಪರದಾಡುತ್ತಿದ್ದ ಮಹಿಳೆಯನ್ನು ಸ್ಥಳೀಯರು ರಕ್ಷಿಸಿ ಹೊರ ತೆಗೆದಿದ್ದಾರೆ. ಗಾಯಾಅಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular