HomeKarnatakaಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಇನ್ಮುಂದೆ ಬೆಂಗಳೂರು ಗ್ರಾಮಾಂತರ ಭಾಗಗಳಲ್ಲಿಯೂ 80 ಕೀ.ಮೀ ವರೆಗೆ BMTC...

ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಇನ್ಮುಂದೆ ಬೆಂಗಳೂರು ಗ್ರಾಮಾಂತರ ಭಾಗಗಳಲ್ಲಿಯೂ 80 ಕೀ.ಮೀ ವರೆಗೆ BMTC ಬಸ್ ಸಂಚಾರ

ಬೆಂಗಳೂರು: ಬೆಂಗಳೂರಿಗರ ಸಂಚಾರ ಜೀವನಾಡಿ ಬಿಎಂಟಿಸಿ ಬಸ್ ಇನ್ಮುಂದೆ ಸಂಚಾರ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲಿದ್ದು, 80 ಕಿಮೀ ವ್ಯಾಪ್ತಿಯಲ್ಲಿ ಸಂಚಾರ ಮಾಡಲು ಸಜ್ಜಾಗಿದೆ.
ಬೆಂಗಳೂರು ನಗರ ಮಾತ್ರವಲ್ಲ ಬೆಂಗಳೂರು ಗ್ರಾಮಾಂತರ ಭಾಗದವರೆಗೂ ಸಂಚರಿಸಲಿದ್ದು, ಇದರಿಣ್ದ ಗ್ರಾಮಾಂತರ ಭಾಗದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಬೆಂಗಳೂರು ನಗರದಲ್ಲಿ ಎಲ್ಲಾ ಭಾಗಗಳಲ್ಲಿಯೂ ಸಂಚಿಸುತ್ತಿದ ಬಿರೆಂಟಿಸಿ ಬಸ್ ಇನ್ಮುಂದೆ ಬೆಂಗಳೂರು ಗ್ರಾಮಾಂತರ ಭಾಗಗಳಿಗೂ ಸಂಚಾರ ಮಾಡಲಿವೆ. ಇಲ್ಲಿಯವರೆಗೆ ಬಿಎಂಟಿಸಿ ಬಸ್ಸುಗಳು 40 ಕಿಮೀ ವ್ಯಾಪ್ತಿಯಲ್ಲಿ ಮಾತ್ರ ಸಂಚಾರ ಮಾಡುತ್ತಿದ್ದವು. ಇನ್ಮುಂದೆ ರಾಮನಗರ, ಕನಕಪುರ, ನೆಲಮಂಗಲ-ಹೊಸಕೋಟೆ, ದೇವನಹಳ್ಳಿ- ದೊಡ್ಡಬಳ್ಳಾಪುರಕ್ಕೂ ಸಂಚಾರ ಮಾಡಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಎಂಟಿಸಿ ಯ ಈ ಹೊಸ ನಿರ್ಧಾರ ಪ್ರಯಾಣಿಕರಿಗೂ ಸಂತಸ ತಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಎಂಟಿಸಿ ಪ್ರಯಾಣಿಕರು, ಗ್ರಾಮಾಂತರ ಭಾಗಗಳಿಗೂ ಬಿಎಂಟಿಸಿ ಬಸ್ಸುಗಳು ಸಂಚಾರ ಮಾಡುವುದರಿಂದ ಶಾಲೆ-ಕಾಲೇಜು, ಕೆಲಸಕ್ಕೆ ಹೋಗುವವರಿಗೆ ತುಂಬಾ ಅನುಕೂಲವಾಗಲಿದೆ ಎಂದಿದ್ದಾರೆ.

ಬಿಎಂಟಿಸಿಯಲ್ಲಿ ಎಲೆಕ್ಟ್ರಿಕ್ ಬಸ್ಸುಗಳು ಸೇರಿದಂತೆ ಒಟ್ಟು 6750 ಬಸ್ಸುಗಳಿವೆ. ಪ್ರತಿದಿನ 45 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದು, ಒಂದು ದಿನಕ್ಕೆ ಬಿಎಂಟಿಸಿ ಬಸ್​ಗಳು 13 ಲಕ್ಷ ಕಿಮೀ ಸಂಚಾರ ಮಾಡುತ್ತವೆ.

ಬಿಎಂಟಿಸಿ ಬಸ್ ಸಂಚಾರ ವಿಸ್ತರಣೆ:
ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ಸ್ಟ್ಯಾಂಡ್​ನಿಂದ ರಾಮನಗರಕ್ಕೆ, ಬನಶಂಕರಿ ಬಸ್ ಸ್ಟ್ಯಾಂಡ್ ನಿಂದ ಕನಕಪುರಕ್ಕೆ, ಮೆಜಸ್ಟಿಕ್ ಕೆಂಪೇಗೌಡ ಬಸ್ ಸ್ಟ್ಯಾಂಡ್​ನಿಂದ ನೆಲಮಂಗಲ, ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರಕ್ಕೆ ಬಸ್ಸುಗಳು ಸಂಚಾರ ಮಾಡಲಿವೆ.

ಬಿಎಂಟಿಸಿಯು 80 ಕಿಮೀ ವ್ಯಾಪ್ತಿಗೆ ಸೇವೆ ವಿಸ್ತರಣೆ ಮಾಡುವ ಮೂಲಕ ಗ್ರಾಮಾಂತರ ಪ್ರದೇಶಗಳು ಹಾಗೂ ನಗರ ಪ್ರದೇಶದ ಸಂಪರ್ಕ ಮತ್ತಷ್ಟು ಬಲವಾಗಲಿದೆ. ಉದ್ಯೋಗ, ಶಿಕ್ಷಣ ಹಾಗೂ ಚಿಕಿತ್ಸಾ ಅಗತ್ಯಗಳಿಗೆ ದಿನನಿತ್ಯ ನಗರಕ್ಕೆ ಬರುವ ಪ್ರಯಾಣಿಕರಿಗೆ ಇದು ಸಮಯ ಮತ್ತು ವೆಚ್ಚ ಉಳಿತಾಯಕ್ಕೆ ಸಹಕಾರಿಯಾಗಲಿದೆ.

ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್ಸುಗಳು ಇನ್ಮುಂದೆ ಬೆಂಗಳೂರು ಗ್ರಾಮಾಂತರ ಭಾಗಗಳಿಗೂ ಸಂಚಾರ ಮಾಡುವುದರಿಂದ ವಿದ್ಯಾರ್ಥಿಗಳಿಗೆ, ಉದ್ಯೋಗಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular