ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಹೆಚ್ಚಳ, ಬಿಸಿಲ ಝಳದ ನಡುವೆಯೇ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ಬಿಎಂಟಿಸಿ ಬಸ್ ಚಾಲಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ-ಬೊಮ್ಮಸಂದ್ರ ಮಾರ್ಗ ಒಮೆಕ್ಸ್ ವೃತ್ತದ ಬಳಿ ಈ ದುರಂತ ಸಂಭವಿಸಿದೆ. 32 ವರ್ಷದ ರಮೇಶ್ ಹೃದಯಾಘಾತಕ್ಕೆ ಬಲಿಯಾದವರು. ಮೃತ ರಮೇಶ್ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರಾಗಿದ್ದರು.
ಜಿಗಣಿಯಿಂದ ಬೊಮ್ಮಸಂದ್ರಕ್ಕೆ ತೆರಳುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

