HomeKarnatakaಬಿಎಂಟಿಸಿ ಬಸ್ ನಲ್ಲಿ ಬೆಂಕಿ ಅವಘಡ; ನಿಲ್ದಾಣದಲ್ಲಿಯೇ ಸುಟ್ಟು ಕರಕಲಾದ ಬಸ್

ಬಿಎಂಟಿಸಿ ಬಸ್ ನಲ್ಲಿ ಬೆಂಕಿ ಅವಘಡ; ನಿಲ್ದಾಣದಲ್ಲಿಯೇ ಸುಟ್ಟು ಕರಕಲಾದ ಬಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ. ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಲಗ್ಗೆರೆ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಿಎಂಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಮೆಜೆಸ್ಟಿಕ್‌ನಿಂದ ಲಗ್ಗೆರೆ ಬಸ್ ನಿಲ್ದಾಣಕ್ಕೆ ಬಂದಿದ್ದ ಬಿಎಂಟಿಸಿ ಬಸ್‌ ನಿಲ್ಲಿಸಿದ ನಂತರ ಚಾಲಕ ಮತ್ತು ನಿರ್ವಾಹಕರು ಬಸ್ ನಿಲ್ದಾಣದೊಳಗೆ ತೆರಳಿದ್ದರು. ಐದೇ ನಿಮಿಷದೊಳಗೆ ಬಸ್‌ನ ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಕೂಡಲೇ ಸ್ಥಳದಲ್ಲಿದ್ದ ಅಗ್ನಿಶಾಮಕ ಸಿಬ್ಬಂದಿ, ಅಧಿಕಾರಿಗಳು, ಚಾಲಕ-ನಿರ್ವಾಹಕರು ಹಾಗೂ ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ, ಬೆಂಕಿ ಆರಿಸಲು ಸಾಧ್ಯವಾಗಲಿಲ್ಲ. ಕೇವಲ 15ರಿಂದ 20 ನಿಮಿಷಗಳಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಘಟನೆ ನಡೆದ ಸಮಯದಲ್ಲಿ ಬಸ್‌ನಲ್ಲಿ ಯಾವುದೇ ಪ್ರಯಾಣಿಕರು ಇರದ ಕಾರಣ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular