ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ನಡೆದಿದೆ.
ದ್ವಿಚಕ್ರವಾಹನಕ್ಕೆ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿ ಹಿಂಬದಿ ಸೀಟ್ ನಲ್ಲಿ ಕುಳಿತಿದ್ದ ವ್ಯಕ್ತಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

