HomeKarnatakaBMTC ಮೃತ ನೌಕರರ ಕುಟುಂಬಕ್ಕೆ 50 ಲಕ್ಷ ಪರಿಹಾರ, ಸರ್ಕಾರಿ ಹುದ್ದೆ

BMTC ಮೃತ ನೌಕರರ ಕುಟುಂಬಕ್ಕೆ 50 ಲಕ್ಷ ಪರಿಹಾರ, ಸರ್ಕಾರಿ ಹುದ್ದೆ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಳಿಕ ಇದೀಗ ಬಿಎಂಟಿಸಿ ನೌಕರರಿಗೂ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಿಎಂಟಿಸಿಯ ನೌಕರರು ಮೃತಪಟ್ಟರೆ ಪರಿಹಾರ ಹಾಗೂ ಸರ್ಕಾರಿ ಉದ್ಯೋಗದ ಭರವಸೆ ನೀಡಿದೆ.

2023ರ ಅಕ್ಟೋಬರ್ 30ರಂದು ಅಪಘಾತದಲ್ಲಿ ಮೃತಪಟ್ಟಿದ್ದ ಬಿಎಂಟಿಸಿ ಡ್ರೈವರ್ ಮಲ್ಲಿಕಾರ್ಜುನ ಅವರ ಪತ್ನಿ ರುದ್ರಮ್ಮಗೆ ಇದೇ ಮೊದಲ ಬಾರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ 50 ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಿದ್ದು, ಸರ್ಕಾರಿ ಉದ್ಯೋಗದ ಭರವಸೆ ನಿಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಮಲ್ಲಿಕಾರ್ಜುನ ಅವರ ಕುಟುಂಬಕ್ಕೆ ಅನುಕಂಪದ ಆಧಾರದ ಮೇಲೆ ಕೆಲಸ ನೀಡುವುದಾಗಿ ಭರವಸೆ ನೀಡಿದ್ದಾರೆ. ಬಿಎಂಟಿಸಿ 2023 ಆಗಸ್ಟ್ 21ರಂದು ಯೂನಿಯನ್ ಬ್ಯಾಂಕ್ ನೊಂದಿಗೆ ಮೂರು ವರ್ಷ ಅವಧಿಗೆ ಒಪ್ಪಂದ ಮಾಡಿಕೊಂಡಿದ್ದು, ಬ್ಯಾಂಕ್ ನಲ್ಲಿ ಖಾತೆ ಹೊಂದಿದ ಬಿಎಂಟಿಸಿ ಸಿಬ್ಬಂದಿಗಳಿಗೆ ಕರ್ತವ್ಯ ನಿರತ ಅಥವಾ ವೈಯಕ್ತಿಕ ಅಪಘಾತದಲ್ಲಿ ಸಾವನ್ನಪ್ಪಿದರೆ ಬ್ಯಾಂಕ್ ವತಿಯಿಂದ ಕೆಲ ಸೌಲಭ್ಯಗಳು ದೊರೆಯಲಿವೆ. ಈ ಮೂಲಕ ಬಿಎಂಟಿಸಿಯ ಮೃತ ನೌಕರರ ಕುಟುಂಬಕ್ಕೆ ಇನ್ಮುಂದೆ 50 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗ ದೊರೆಯಲಿದೆ.

For Latest News Updates, Join Our Whatsapp Community🚩
RELATED ARTICLES

Most Popular