HomeKarnatakaಪ್ರಯಾಣಿಕರಿಗೆ ಗುಡ್ ನ್ಯೂಸ್: ಹೊಸ ವರ್ಷಕ್ಕೆ 320 ಎಲೆಕ್ಟ್ರಿಕ್ ಎಸಿ ಬಸ್ ಬಿಎಂಟಿಸಿಗೆ ಸೇರ್ಪಡೆ

ಪ್ರಯಾಣಿಕರಿಗೆ ಗುಡ್ ನ್ಯೂಸ್: ಹೊಸ ವರ್ಷಕ್ಕೆ 320 ಎಲೆಕ್ಟ್ರಿಕ್ ಎಸಿ ಬಸ್ ಬಿಎಂಟಿಸಿಗೆ ಸೇರ್ಪಡೆ

ಬೆಂಗಳೂರು: ಬಿಎಂಟಿಸಿಯ 320 ಹೊಸ ಎಸಿ ಎಲೆಕ್ಟ್ರಿಕ್ ಬಸ್ ಗಳು ಜನವರಿಯಿಂದ ಸಂಚಾರ ಆರಂಭಿಸಲಿದೆ. 320 ಎಸಿ ಎಲೆಕ್ಟ್ರಿಕ್ ಬಸ್ ಗಳಿಗೆ ಟೆಂಡರ್ ಕರೆಯಲಾಗಿದ್ದು, ಈ ಟೆಂಡರ್ ಅನ್ನು ಅಶೋಕ ಲೇಲ್ಯಾಂಡ್ ಕಂಪನಿಯ ಪಾಲುದಾರ ಸಂಸ್ಥೆ ಓಂ ಕಂಪನಿ ಪಡೆದುಕೊಂಡಿದೆ. ಈಗಾಗಲೇ ವರ್ಕ್ ಆರ್ಡರ್ ಕೂಡ ನೀಡಲಾಗಿದೆ.

12 ವರ್ಷಕ್ಕೆ ಗುತ್ತಿಗೆ ಆಧಾರದಲ್ಲಿ 320 ಬಸ್ ಗಳನ್ನು ತೆಗೆದುಕೊಳ್ಳಲಾಗುವುದು. ಎಲೆಕ್ಟ್ರಿಕ್ ಬಸ್ ಗಳಿಗೆ ಚಾಲಕರನ್ನು ಅಶೋಕ ಲೇಲ್ಯಾಂಡ್ ಕಂಪನಿ ನೇಮಕ ಮಾಡಲಿದೆ. ನಿರ್ವಾಹಕರನ್ನು ಸರ್ಕಾರ ನೇಮಕ ಮಾಡಲಿದ್ದು, ಡಿಸೆಂಬರ್ 15ರ ನಂತರ ಟ್ರಯಲ್ ರನ್ ಗಾಗಿ ಬೆಂಗಳೂರಿಗೆ ಬಸ್ ಗಳು ಬರಲಿವೆ.

ಹೊಸ ಎಲೆಕ್ಟ್ರಿಕ್ ಬಸ್ ಗಳು ಮೆಜೆಸ್ಟಿಕ್ ನಿಂದ ವಿಮಾನ ನಿಲ್ದಾಣ ಮಾರ್ಗದಲ್ಲಿ ಸಂಚಾರ ಮಾಡಲಿವೆ. ಸದ್ಯ ವಿಮಾನ ನಿಲ್ದಾಣ ಮಾರ್ಗದಲ್ಲಿ ಬಿಎಂಟಿಸಿ ವೋಲ್ವೋ ಬಸ್ ಗಳು ಸಂಚರಿಸುತ್ತಿದ್ದು, ಈಗಿರುವ ಎಲ್ಲಾ ವೋಲ್ವೋ ಬಸ್ ಗಳು ನಗರದ ಬೇರೆ ಮಾರ್ಗದಲ್ಲಿ ಸಂಚರಿಸಲಿವೆ. ಈಗಾಗಲೇ ಬಿಎಂಟಿಸಿಯಲ್ಲಿ 1 ಸಾವಿರಕ್ಕೂ ಅಧಿಕ ಎಲೆಕ್ಟ್ರಿಕ್ ಬಸ್ ಗಳ ಸಂಚಾರವಿದೆ. ಈ ಹೊಸ 320 ಎಸಿ ಎಲೆಕ್ಟ್ರಿಕ್ ಬಸ್ ಗಳ ಸೇರ್ಪಡೆಯಿಂದ ಒಟ್ಟು ಎಲೆಕ್ಟ್ರಿಕ್ ಬಸ್ ಗಳ ಸಂಖ್ಯೆ 1320ಕ್ಕೆ ಏರಿಕೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular