HomeKarnatakaಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: 320 ಎಸಿ ಎಲೆಕ್ಟ್ರಿಕ್ ಬಸ್ ಬಿಎಂಟಿಸಿಗೆ ಸೇರ್ಪಡೆ ಶೀಘ್ರ

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: 320 ಎಸಿ ಎಲೆಕ್ಟ್ರಿಕ್ ಬಸ್ ಬಿಎಂಟಿಸಿಗೆ ಸೇರ್ಪಡೆ ಶೀಘ್ರ

ಬೆಂಗಳೂರು: ಬಿಎಂಟಿಸಿಗೆ 320 ಎಸಿ ಎಲೆಕ್ಟ್ರಿಕ್ ಬಸ್ ಗಳು ಸೇರ್ಪಡೆಯಾಗಲಿವೆ. ಡೀಸೆಲ್ ಬಸ್ ಗಳಿಂದ ಆಗುತ್ತಿರುವ ವೆಚ್ಚ ತಗ್ಗಿಸಲು ಮತ್ತು ಪರಿಸರ ಸಂರಕ್ಷಣೆ ಉದ್ದೇಶದಿಂದ ಹೊಸದಾಗಿ 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್ ಗಳ ಸೇರ್ಪಡೆಗೆ ಬಿಎಂಟಿಸಿ ಮುಂದಾಗಿದೆ.

ಕೇಂದ್ರ ಸರ್ಕಾರ ಸಾರ್ವಜನಿಕ ಸಾರಿಗೆಗಳಲ್ಲಿ ಎಲೆಕ್ಟ್ರಿಕ್ ಬಸ್ ಸೇರಿದಂತೆ ಇತರೆ ವಾಹನಗಳ ಸೇರ್ಪಡೆಗೆ ಒತ್ತು ನೀಡುತ್ತಿದ್ದು, ರಾಜ್ಯ ಸರ್ಕಾರಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿಯಲ್ಲಿ 390 ನಾನ್ ಎಸಿ ಎಲೆಕ್ಟ್ರಿಕ್ ಬಸ್ ಗಳಿದ್ದು, ಇವುಗಳೊಂದಿಗೆ 320 ಎಸಿ ಎಲೆಕ್ಟ್ರಿಕ್ ಬಸ್ ಗಳ ಸೇರ್ಪಡೆ ಮಾಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಎಸಿ ಎಲೆಕ್ಟ್ರಿಕ್ ಬಸ್ ಗಳನ್ನು ಖರೀದಿಸಬೇಕೆ ಅಥವಾ ಗುತ್ತಿಗೆ ಆಧಾರದಲ್ಲಿ ಪಡೆಯಬೇಕೆಂಬುದರ ಬಗ್ಗೆ ಚರ್ಚೆ ನಡೆದಿದ್ದು, ಶೀಘ್ರವೇ 320 ಬಸ್ ಗಳನ್ನು ಸೇರ್ಪಡೆ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular