HomeKarnatakaBREAKING: ಬಸ್ ಗೆ ಬೆಂಕಿ; ಕಂಡಕ್ಟರ್ ಸಜೀವ ದಹನ

BREAKING: ಬಸ್ ಗೆ ಬೆಂಕಿ; ಕಂಡಕ್ಟರ್ ಸಜೀವ ದಹನ

ಬೆಂಗಳೂರು: ಬಸ್ ನಲ್ಲಿ ಅಗ್ನಿ ದುರಂತ ಸಂಭವಿಸಿ ಒಬ್ಬರು ಸಜೀವ ದಹನವಾಗಿದ್ದಾರೆ. ಬಿಎಂಟಿಸಿ ಬಸ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಕಂಡಕ್ಟರ್ ಸಜೀವ ದಹನವಾದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಿಎಂಟಿಸಿ ಕಂಡಕ್ಟರ್ ಮುತ್ತಯ್ಯಸ್ವಾಮಿ(45) ಮೃತಪಟ್ಟವರು ಎಂದು ಹೇಳಲಾಗಿದೆ. ಬಸ್ ನಲ್ಲಿ ಮಲಗಿದ್ದ ವೇಳೆ ಬೆಳಗ್ಗೆ 5.30 ಕ್ಕೆ ಅಗ್ನಿ ದುರಂತ ಸಂಭವಿಸಿದೆ. ಲಿಂಗಧೀರನಹಳ್ಳಿ ಬಳಿ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular