ಗಮನಿಸಿ : ‘BMTC’ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನ, ಈ ರೀತಿ ಅರ್ಜಿ ಸಲ್ಲಿಸಿ

ಬೆಂಗಳೂರು : ಬಿಎಂಟಿಸಿ ಬಸ್ಗಳಲ್ಲಿ ಉಚಿತ / ರಿಯಾಯಿತಿ ದರದಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳು ಪಾಸ್ಗಾಗಿ ಮೇ 26ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದವರಿಗೆ ಜೂನ್ 1ರಿಂದ ವಿದ್ಯಾರ್ಥಿ ಪಾಸ್ಗಳನ್ನು ವಿತರಣೆ ಮಾಡಲಾಗುವುದು. ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಅರ್ಜಿ ನಮೂನೆ ಲಭ್ಯವಿದೆ. ಬೆಂಗಳೂರು ಒನ್ ಕೇಂದ್ರಗಳ ಮೂಲಕವು ಅರ್ಜಿ ಸಲ್ಲಿಸಲು ಅವಕಾಶವಿದೆ.

ಶಕ್ತಿ ಯೋಜನೆಯಡಿ ವಿದ್ಯಾರ್ಥಿನಿಯರಿಗೆ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಇದೆ. ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080–22483777 ಸಂಪರ್ಕಿಸಬಹುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read