HomeKarnatakaನಿಯಮ ಮೀರಿ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚಾರ ಆರಂಭಕ್ಕೆ ಆಕ್ಷೇಪಿಸಿದ KSRTC

ನಿಯಮ ಮೀರಿ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚಾರ ಆರಂಭಕ್ಕೆ ಆಕ್ಷೇಪಿಸಿದ KSRTC

ಬೆಂಗಳೂರು: ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಗಳನ್ನು ಬಿಡಲು ಬಿಎಂಟಿಸಿ ಮುಂದಾಗಿದ್ದು, ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಬಿಎಂಟಿಸಿ ಸಂಚಾರಕ್ಕೆ ಅನುಮತಿ ನೀಡಿಲಾಗಿದೆ. ಆದರೆ, ಬಿಎಂಟಿಸಿ ಚಿಕ್ಕಬಳ್ಳಾಪುರಕ್ಕೂ ಬಸ್ ಗಳನ್ನು ಬಿಡಲಿದೆ. ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಸಂಚಾರ ವಿಸ್ತರಣೆ ಮಾಡಲು ಮುಂದಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಬಿಎಂಪಿ ವ್ಯಾಪ್ತಿಯಿಂದ 25 ಕಿಲೋ ಮೀಟರ್ ಬಸ್ ಓಡಿಸಲು ಮಾತ್ರ ಬಿಎಂಟಿಸಿಗೆ ಅವಕಾಶವಿದೆ. ಆದರೆ ನಿಯಮ ಮೀರಿ ಬಿಎಂಟಿಸಿ ಬಸ್ ಓಡಿಸಲು ಸಿದ್ಧವಾಗಿದ್ದು, ಇದಕ್ಕೆ ಕೆಎಸ್ಆರ್ಟಿಸಿ ಆಕ್ಷೇಪ ವ್ಯಕ್ತಪಡಿಸಿದೆ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಸುಮಾರು 60 ಕಿಲೋಮೀಟರ್ ಅಂತರವಿದ್ದು, ಬಿಎಂಟಿಸಿ ಬಸ್ ಸಂಚಾರ ವಿಸ್ತರಿಸಲು ಅವಕಾಶವಿಲ್ಲವೆಂದು ಕೆಎಸ್ಆರ್ಟಿಸಿ ಹೇಳಿದೆ.

ಬಿಎಂಟಿಸಿ ನಿರ್ಧಾರಕ್ಕೆ ಕೆಎಸ್ಆರ್ಟಿಸಿ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಎಂಟಿಸಿ ನಡೆ ಖಂಡಿಸಿ ಸರ್ಕಾರಕ್ಕೆ ಪತ್ರ ಬರೆಯಲು ಕೆಎಸ್ಆರ್ಟಿಸಿ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular