ಡಿಜಿಟಲ್ ಡೆಸ್ಕ್ : ಬಿಎಂಟಿಸಿಯಿಂದ ಘಾಟಿ – ಈಶ ಫೌಂಡೇಶನ್ಗೆ ಒಂದು ದಿನದ ಪ್ಯಾಕೇಜ್ ಟೂರ್ ಆರಂಭಿಸಲಾಗಿದ್ದು, ಪ್ರವಾಸವು ಪ್ರತಿ ಶನಿವಾರ, ಭಾನುವಾರ ಮತ್ತು ಸಾರ್ವತ್ರಿಕ ರಜೆ ದಿನಗಳಲ್ಲಿ ಲಭ್ಯವಿರುತ್ತದೆ. 600 ರೂ. ದರ ನಿಗದಿಪಡಿಸಲಾಗಿದೆ.
ಪ್ರಯಾಣಿಕರು ಮುಂಗಡ ಆಸನಗಳನ್ನು ಕಾಯ್ದಿರಿಸಲು ಕೆಎಸ್ಆರ್ಟಿಸಿ ವೆಬ್ಸೈಟ್ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 080 22483777 ಅಥವಾ 7760991212 ಗೆ ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.

