HomeKarnatakaಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್: ಬಿಎಂಟಿಸಿ ರಾತ್ರಿ ಪಾಳಿ ಹೆಚ್ಚುವರಿ ಟಿಕೆಟ್ ಶುಲ್ಕ...

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್: ಬಿಎಂಟಿಸಿ ರಾತ್ರಿ ಪಾಳಿ ಹೆಚ್ಚುವರಿ ಟಿಕೆಟ್ ಶುಲ್ಕ ರದ್ದು

ಬೆಂಗಳೂರು: ಬಿಎಂಟಿಸಿ ರಾತ್ರಿ ಪಾಳಿ ಬಸ್ ಗಳಲ್ಲಿ ಒನ್ ಅಂಡ್ ಆಫ್ ಟಿಕೆಟ್ ರದ್ದುಪಡಿಸಲಾಗಿದ್ದು, ಏಕರೂಪ ಟಿಕೆಟ್ ದರ ನಿಗದಿ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಬಿಎಂಟಿಸಿ ಬಸ್ ಗಳಲ್ಲಿ ರಾತ್ರಿ ಪಾಳಿಯಲ್ಲಿ ಹೆಚ್ಚುವರಿ ಟಿಕೆಟ್ ಶುಲ್ಕ ತೆಗೆದುಕೊಳ್ಳುವ ವ್ಯವಸ್ಥೆ ರದ್ದು ಮಾಡಿ, ಇಡೀ ದಿನ ಆಯಾ ಬಸ್ ಗಳ ಸೇವೆಗೆ ತಕ್ಕಂತೆ ಏಕರೂಪ ಟಿಕೆಟ್ ಪಡೆಯಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಎಂಟಿಸಿ ರಚನೆಯಾಗಿ 25 ವರ್ಷ ಪೂರ್ಣಗೊಂಡಿದ್ದು, ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಿಎಂಟಿಸಿ ಸೇವೆ ಸೇರಿ ಇನ್ನಿತರೆ ಮಾಹಿತಿ ನೀಡುವ ಮೊಬೈಲ್ ಆಪ್ ಬಿಡುಗಡೆ ಮಾಡಲಾಗುವುದು. ಏಕರೂಪ ಟಿಕೆಟ್ ದರ ನಿಗದಿ ಮಾಡಲಾಗುವುದು. ರಾತ್ರಿ ಪಾಳಿ ಬಸ್ ಗಳಲ್ಲಿ ಮಾಮೂಲಿ ದರದ ಶೇಕಡ 50ರಷ್ಟು ಹೆಚ್ಚಿನ ಟಿಕೆಟ್ ದರ ವಸೂಲಿ ಮಾಡುತ್ತಿದ್ದು, ಅದನ್ನು ರದ್ದು ಮಾಡಿ ಎಲ್ಲಾ ಅವಧಿಯಲ್ಲಿಯೂ ಏಕರೂಪ ಟಿಕೆಟ್ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular