HomeKarnatakaಬಿಎಂಟಿಸಿ ಕಂಡಕ್ಟರ್, ಮೇಲ್ವಿಚಾರಕರ ಹುದ್ದೆ ನೇಮಕಾತಿ: ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

ಬಿಎಂಟಿಸಿ ಕಂಡಕ್ಟರ್, ಮೇಲ್ವಿಚಾರಕರ ಹುದ್ದೆ ನೇಮಕಾತಿ: ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ಕಲ್ಯಾಣ ಕರ್ನಾಟಕ ಮೀಸಲಾತಿ ಅಡಿಯಲ್ಲಿ ಬಿಎಂಟಿಸಿ ವತಿಯಿಂದ ನಡೆಸಲಾಗಿದ್ದ ನಿರ್ವಾಹಕರು, ದರ್ಜೆ 3 ಮೇಲ್ವಿಚಾರಕರ ಹುದ್ದೆ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಬಿಎಂಟಿಸಿ www.mybmtc.karnataka.gov.in ವೆಬ್ಸೈಟ್ ನಲ್ಲಿ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಗುಂಪುವಾರು ಹಾಗೂ ಶೇಕಡವಾರು ಅಂಕಗಳಿಗಿಂತ ಹೆಚ್ಚಿನ ಅಂಕ ಗಳಿಸಿದ್ದರೂ ಸಂಭವನೀಯ ಆಯ್ಕೆ ಪಟ್ಟಿಯಲ್ಲಿ ಸೇರ್ಪಡೆಗೊಳ್ಳದ ಅಭ್ಯರ್ಥಿಗಳು ಸಂಬಂಧಿಸಿದ ಮೂಲ ದಾಖಲಾತಿಗಳೊಂದಿಗೆ ಅಕ್ಟೋಬರ್ 14ರ ಸಂಜೆ 5:30ರ ಒಳಗೆ ಬೆಂಗಳೂರಿನ ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಆಯ್ಕೆ ಸಮಿತಿಯ ಅಧ್ಯಕ್ಷರ ಮುಂದೆ ಹಾಜರಾಗಿ ಲಿಖಿತ ಆಕ್ಷೇಪಣೆ ಸಲ್ಲಿಸಬೇಕಿದೆ. ಅಕ್ಟೋಬರ್ 14ರ ನಂತರ ಸಲ್ಲಿಕೆಯಾಗುವ ಅಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಬಿಎಂಟಿಸಿ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular