HomeKarnatakaಮಹಿಳಾ ಸೀಟ್ ಗಳಲ್ಲಿ ಕುಳಿತವರು, ಟಿಕೆಟ್ ಇಲ್ಲದೇ ಪ್ರಯಾಣಿಸುತ್ತಿದ್ದವರಿಗೆ ಬಿಗ್ ಶಾಕ್: ಭರ್ಜರಿ ದಂಡ ವಸೂಲಿ...

ಮಹಿಳಾ ಸೀಟ್ ಗಳಲ್ಲಿ ಕುಳಿತವರು, ಟಿಕೆಟ್ ಇಲ್ಲದೇ ಪ್ರಯಾಣಿಸುತ್ತಿದ್ದವರಿಗೆ ಬಿಗ್ ಶಾಕ್: ಭರ್ಜರಿ ದಂಡ ವಸೂಲಿ ಮಾಡಿದ ಬಿಎಂಟಿಸಿ

ಬೆಂಗಳೂರು: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ ಬಿಎಂಟಿಸಿ ಒಂದು ತಿಂಗಳಲ್ಲಿ 6.20 ಲಕ್ಷ ರೂ. ದಂಡ ವಸೂಲಿ ಮಾಡಿದೆ.

ಬಿಎಂಟಿಸಿ ತನಿಖಾ ತಂಡ ಬಿಎಂಟಿಸಿ ಬಸ್ ಗಳಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸುತ್ತಿದ್ದ 2953 ಪ್ರಯಾಣಿಕರನ್ನು ಪತ್ತೆ ಹಚ್ಚಿದ್ದು, 5.87 ಲಕ್ಷ ರೂ. ದಂಡ ವಸೂಲಿ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ ತಿಂಗಳಲ್ಲಿ 15,198 ಟ್ರಿಪ್ ಗಳನ್ನು ಬಿಎಂಟಿಸಿ ತನಿಖಾ ತಂಡ ತಪಾಸಣೆ ಮಾಡಿದೆ. ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಮಾಡಿ ದಂಡ ವಸೂಲಿ ಮಾಡಲಾಗಿದೆ. ಅದೇ ರೀತಿ ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿದ್ದ ಸೀಟ್ ಗಳಲ್ಲಿ ಕುಳಿತು ಪ್ರಯಾಣಿಸುತ್ತಿದ್ದ 332 ಪುರುಷ ಪ್ರಯಾಣಿಕರಿಂದ 33,200 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಒಟ್ಟಾರೆ ಜುಲೈನಲ್ಲಿ 3285 ಪ್ರಯಾಣಿಕರಿಂದ 6.20 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular