HomeLatest Newsಬಿಎಂಟಿಸಿಗೆ ಕೇಂದ್ರ ಸರ್ಕಾರದ PM e- DRIVE ಯೋಜನೆಯಡಿ 4,500 ವಿದ್ಯುತ್ ಚಾಲಿತ ಬಸ್

ಬಿಎಂಟಿಸಿಗೆ ಕೇಂದ್ರ ಸರ್ಕಾರದ PM e- DRIVE ಯೋಜನೆಯಡಿ 4,500 ವಿದ್ಯುತ್ ಚಾಲಿತ ಬಸ್

ಬೆಳಗಾವಿ(ಸುವರ್ಣಸೌಧ): ಬಿಎಂಟಿಸಿಗೆ ಕೇಂದ್ರ ಸರ್ಕಾರದ PM e- DRIVE ಯೋಜನೆಯಡಿ 4,500 ವಿದ್ಯುತ್ ಚಾಲಿತ ಬಸ್‍ಗಳನ್ನು ಜಿಸಿಸಿ ಮಾದರಿಯಲ್ಲಿ ಒದಗಿಸಲು ಮಂಜೂರಾತಿ ನೀಡಲಾಗಿದ್ದು, ಟೆಂಡರ್ ಜಾರಿಯಲ್ಲಿದೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್. ಎಸ್. ಗೋಪಿನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಉತ್ತರ ನೀಡಿದ್ದಾರೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಿಂದ 25 ಕಿ.ಮೀ.ವರೆಗೆ ಕಾರ್ಯಾಚರಣೆ ವ್ಯಾಪ್ತಿಯನ್ನು ಹೊಂದಿದ್ದು, ಬೆಂಗಳೂರು ನಗರ ಹಾಗೂ ಹೊರ ವಲಯದ ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ, ಸುಲಭ, ಸುರಕ್ಷಿತ ಸಾರಿಗೆ ಸೇವೆಯನ್ನು ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿದಿನ ಹವಾನಿಯಂತ್ರಿತ ಸಾರಿಗೆಗಳನ್ನು ಒಳಗೊಂಡಂತೆ 1,817 ಮಾರ್ಗಗಳಲ್ಲಿ 6,274 ಅನುಸೂಚಿಗಳನ್ನು 65,934 ಸುತ್ತುವಳಿಗಳೊಂದಿಗೆ 13 ಲಕ್ಷ ಕಿ.ಮೀ.ಗಳಲ್ಲಿ ಬೆಂಗಳೂರು ನಗರ ಹಾಗೂ ಹೊರವಲಯದ ಪ್ರಯಾಣಿಕರ ದಟ್ಟಣೆ / ಅವಶ್ಯಕತೆಗನುಗುಣವಾಗಿ ಕಾರ್ಯಾಚರಣೆ ಮಾಡುತ್ತಿದ್ದು, ಸರಾಸರಿ 44 ಲಕ್ಷ ಪ್ರಯಾಣಿಕರು ಸಂಸ್ಥೆಯ ಸಾರಿಗೆಗಳಲ್ಲಿ ಪ್ರಯಾಣಿಸುತ್ತಿದ್ದು, ಸಂಸ್ಥೆಯಲ್ಲಿ ನವೆಂಬರ್-2025ರ ಅಂತ್ಯಕ್ಕೆ 7051 ಬಸ್ಸುಗಳು ಕಾರ್ಯಾಚರಣೆಯಲ್ಲಿವೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಸಾರಿಗೇತರ ಆದಾಯವನ್ನು ಕ್ರೋಢಿಕರಿಸಲು ಬಸ್ಸುಗಳ ಮೇಲೆ ಜಾಹೀರಾತು ಪ್ರದರ್ಶಿಸಲು ಪ್ರೆಕ್ಯೂರ್‌ಮೆಂಟ್‌ ಮೂಲಕ ಟೆಂಡರ್ ಕರೆದು ಆಸಕ್ತ ವ್ಯಕ್ತಿ/ಏಜೆನ್ಸಿ/ಕಂಪನಿಗಳಿಗೆ ನಿಗದಿತ ಅವಧಿಗೆ ಹಾಗೂ ಇತರೆ ನಿಬಂಧನೆಗಳಿಗೆ ಒಳಪಟ್ಟು ಪರವಾನಗಿ ನೀಡುವ ಜಾಹೀರಾತು ಪದ್ಧತಿ ಜಾರಿಯಲ್ಲಿರುತ್ತದೆ.

ಪರವಾನಗಿ ಶುಲ್ಕದ ಜೊತೆಗೆ ಜಾಹೀರಾತು ಪ್ರದರ್ಶಿಸಲಾಗುವ ಪ್ರತಿ ಬಸ್ಸುಗಳಿಗೆ ಅನ್ವಯವಾಗುವ ಇತರೆ ಶುಲ್ಕಗಳನ್ನು ಸಹ ಪಾವತಿಸಬೇಕಾಗಿರುತ್ತದೆ.

ಸಾರಿಗೆ ನಿಗಮಗಳಿಗೆ ಪ್ರಸ್ತುತ ಆರ್ಥಿಕ ವರ್ಷದಲ್ಲಿ ಒಟ್ಟು 650 ಬಸ್ಸುಗಳನ್ನು ಖರೀದಿಸುವಂತೆ ಆರ್ಥಿಕ ಇಲಾಖೆಯು ಸೂಚಿಸಿದ್ದು, ಅದರಂತೆ ಕ.ರಾ.ರ.ಸಾ.ನಿಗಮಕ್ಕೆ ಅವಶ್ಯವಿರುವ 500 ಡೀಸೆಲ್ ಮಾದರಿಯ ಬಸ್ಸುಗಳನ್ನು ಹಾಗೂ 144 ನಗರ ಸಾರಿಗೆ ಮಾದರಿ ವಾಹನಗಳನ್ನು ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಪ್ರಸ್ತಾವನೆಯು ಪರಿಶೀಲನೆಯಲ್ಲಿದೆ.

ಪ್ರಸ್ತುತ ಸಾಲಿನಲ್ಲಿ ಇಲ್ಲಿಯವರೆಗೆ 5 ವೋಲ್ವೊ ಮಲ್ಟಿ ಆಕ್ಸಲ್ ಸೀಟರ್ ಹಾಗೂ 5 ಮಲ್ಟಿ ಆಕ್ಸಲ್ ಸ್ವೀಪರ್ ವಾಹನಗಳನ್ನು ಖರೀದಿಸಲಾಗಿದೆ ಹಾಗೂ 60 ನಾನ್ ಎಸಿ ಸ್ವೀಪರ್ (ಪಲ್ಲಕ್ಕಿ) ವಾಹನಗಳಿಗೆ ಖರೀದಿ ಆದೇಶ ಬಿಡುಗಡೆ ಮಾಡಲಾಗಿದ್ದು, ಮಾರ್ಚ್-2026ರೊಳಗೆ ಸೇರ್ಪಡೆಗೊಳಿಸಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular