HomeKarnatakaBREAKING: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ತಡರಾತ್ರಿ ಮೆಜೆಸ್ಟಿಕ್ ನಲ್ಲಿ ಬಸ್ ಹರಿದು ಯುವಕ ಸ್ಥಳದಲ್ಲೇ...

BREAKING: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ತಡರಾತ್ರಿ ಮೆಜೆಸ್ಟಿಕ್ ನಲ್ಲಿ ಬಸ್ ಹರಿದು ಯುವಕ ಸ್ಥಳದಲ್ಲೇ ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ವಿಕಲಚೇತನ ಯುವಕ ಸಾವನ್ನಪ್ಪಿದ ಘಟನೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ತಡರಾತ್ರಿ 12:15ಕ್ಕೆ ನಡೆದಿದೆ.

ವಿಶೇಷ ಚೇತನ ಯುವಕ ಬಸ್ ನಿಲ್ದಾಣದಲ್ಲಿ ನಡೆದುಕೊಂಡು ಹೋಗುವಾಗ ಅತಿ ವೇಗವಾಗಿ ಬಂದ ಬಿಎಂಟಿಸಿ ಬಸ್ ನಿಯಂತ್ರಣ ಸಿಗದೇ ಯುವಕನ ಮೇಲೆಯೇ ಹರಿದಿದೆ. ಬಸ್ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣವೆನ್ನಲಾಗಿದೆ.

ಮೆಜೆಸ್ಟಿಕ್ ನಿಲ್ದಾಣಕ್ಕೆ ವೇಗವಾಗಿ ಬಸ್ ಚಾಲನೆ ಮಾಡಿಕೊಂಡು ಬಂದ ಚಾಲಕ ನಡೆದುಕೊಂಡು ಹೋಗುತ್ತಿದ್ದ ಯುವಕನ ಮೇಲೆಯೇ ನುಗ್ಗಿಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಯುವಕ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಯುವಕನ ಮೇಲೆ ಬಸ್ ಹರಿದರೂ ಚಾಲಕ ಗಮನಿಸಿಲ್ಲ. ಸ್ಥಳದಲ್ಲಿದ್ದವರು ಕೂಗಾಡಿದಾಗ ಮುಂದೆ ಹೋಗಿ ಬಸ್ ನಿಲ್ಲಿಸಿ ಓಡಲು ಶುರು ಮಾಡಿದಾಗ ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular