HomeIndiaಅಂದು ಪೋರ್ಶೆ, ಇಂದು BMW ಕಾರು ಡಿಕ್ಕಿ: ಮಹಿಳೆ ಸ್ಥಳದಲ್ಲೇ ದುರ್ಮರಣ; ಪತಿ ಸ್ಥಿತಿ ಗಂಭೀರ

ಅಂದು ಪೋರ್ಶೆ, ಇಂದು BMW ಕಾರು ಡಿಕ್ಕಿ: ಮಹಿಳೆ ಸ್ಥಳದಲ್ಲೇ ದುರ್ಮರಣ; ಪತಿ ಸ್ಥಿತಿ ಗಂಭೀರ

ಮುಂಬೈ: ಪತಿಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಮುಂಬೈನ ವರ್ಲಿಯ ಕೋಳಿವಾಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಮೀನು ಖರೀದಿಸಲೆಂದು ಮಹಿಳೆ ಪತಿಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಪಲ್ಟಿಯಾಗಿ ಪತಿ-ಪತ್ನಿ ಇಬ್ಬರೂ ಕಾರಿನ ಬಾನೆಟ್ ಮೇಲೆ ಬಿದ್ದಿದ್ದಾರೆ. ಪತಿ ಬಾನೆಟ್ ಮೇಲಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ಬಳಿಕ ಕಾರಿನ ಚಾಲಕ ಪರಾರಿಯಾಗಿದ್ದಾನೆ. ಮಹಿಳೆಯ ಪತಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಟ್ ಆಂಡ್ ರನ್ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಬಣದ ಹಿರಿಯ ನಾಯಕನ ಪುತ್ರನಿಗೆ ಸೇರಿದ್ದು ಎನ್ನಲಾಗಿದೆ. ಕಾರನ್ನು ಶಿವಸೇನೆ ನಾಯಕನ ಪುತ್ರ 24 ವರ್ಷದ ಯುವಕ ಚಲಾಯಿಸುತ್ತಿದ್ದ. ಅಪಘಾತದ ಬಳಿಕ ಪರಾರಿಯಾಗಿರುವ ಯುವಕ ಮಿಹಿರ್ ಶಾ, ಕಾರು ಅಪಘಾತದ ವೇಳೆ ಪಾನಮತ್ತನಾಗಿದ್ದ ಎಂದು ತಿಳಿದು ತಿಳಿದುಬಂದಿದೆ.

ಇತ್ತೀಚೆಗಷ್ಟೇ ಪುಣೆಯಲ್ಲಿ 17 ವರ್ಷದ ಬಾಲಕ ದುಬಾರಿ ಪೋರ್ಶೆ ಕಾರನ್ನು ಕುಡಿದ ಮತ್ತಿನಲ್ಲಿ ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದಿದ್ದ. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಬಾಲಕನ ತಂದೆ, ತಾಯಿ, ಅಜ್ಜನನ್ನೂ ಪೊಲೀಸರು ಬಂಧಿಸಿದ್ದರು. ಆರೋಪಿ ಬಾಲಕ ವೇದಾಂತ್ ಅಗರ್ವಾಲ್ ಜಾಮೀನಿನ ಮೇಲೆ ಹೊರಬಂದಿದ್ದ ಎನ್ನಲಾಗಿದೆ. ಈ ಘಟನೆ ಬೆನ್ನಲ್ಲೇ ಇದೀಗ BMW ಕಾರು ಬೈಕ್ ಗೆ ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular