ನೊಯ್ಡಾ: ಐಷಾರಾಮಿ BMW ಕಾರು ಸ್ಕೂಟಿಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನೊಯ್ಡಾದಲ್ಲಿ ನಡೆದಿದೆ.
ಆಯತ್ ಮೃತ ಬಾಲಕಿ. ಮಗಳು ಆಯತ್ ಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಗುಲ್ ಮೊಹಮ್ಮದ್ ಹಾಗೂ ಆಕೆಯ ಮಾವ ರಾಜ ಸ್ಕೂಟಿಯಲ್ಲಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ನೊಯ್ಡಾದ ಸೆಕ್ಟರ್ 45ರ ಬಳಿ BMW ಕಾರು ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆಯತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಂದೆ ಹಾಗೂ ಮಾವ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕ ಹಾಗೂ ಸಹಪ್ರಯಾಣಿಕ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.