ಮಾಜಿ ಸಂಸದ ಚಂದ್ರಪ್ಪ ವಿರುದ್ಧ ಸುಳ್ಳು ಪ್ರಮಾಣ ಪತ್ರ ಸೃಷ್ಟಿಸಿ ಷಡ್ಯಂತ್ರ: ಇಬ್ಬರ ವಿರುದ್ಧ ಎಫ್ಐಆರ್

ಬೆಂಗಳೂರು: ಚಿತ್ರದುರ್ಗದ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಅವರ ಶಾಲಾ ದಾಖಲಾತಿ ಮತ್ತು ಜಾತಿ ಪ್ರಮಾಣ ಪತ್ರ ನಕಲು ಮಾಡಿ ಷಡ್ಯಂತ್ರ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಬಿ.ಎನ್. ಚಂದ್ರಪ್ಪ ದೂರು ನೀಡಿದ್ದು, ಚಿತ್ರದುರ್ಗದ ಕೆಇಬಿ ಹೌಸ್ ಗೋಪಾಲಪುರ ರಸ್ತೆಯ ರಾಜಪ್ಪ ಮತ್ತು ಚಳ್ಳಕೆರೆ ತಾಲೂಕು ಅಬ್ಬೇನಹಳ್ಳಿಯ ಬಾಬು ಅವರ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

2014ರ ಲೋಕಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದ ಚಂದ್ರಪ್ಪ ಜಯಗಳಿಸಿದ್ದರು. 2019 ರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಈ ಬಾರಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ಮಾಡಿಕೊಂಡಿದ್ದು, ಅವರು ಚುನಾವಣೆಗೆ ಸ್ಪರ್ಧಿಸಿದಂತೆ ತಡೆಯಲು ಅವರ ಜಾತಿಯನ್ನು ಆದಿ ಕರ್ನಾಟಕದ ಬದಲಾಗಿ ಮಾಸಾಳ ಎಂದು ಬಿಂಬಿಸಿ ಶಾಲಾ ವರ್ಗಾವಣೆ ಪತ್ರದ ನಕಲಿ ಪ್ರಮಾಣ ಪತ್ರಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಕೆಲವು ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಪರಿಶಿಷ್ಟ ಜಾತಿಯಲ್ಲಿ ಒಡಕು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಚಂದ್ರಪ್ಪ ದೂರು ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read