HomeKarnatakaಬೆಂಗಳೂರಿಗೆ ಸುರ್ಜೇವಾಲ: ನಿಗಮ -ಮಂಡಳಿ ನೇಮಕ ಪಟ್ಟಿ ಇವತ್ತೇ ಅಂತಿಮ ಸಾಧ್ಯತೆ

ಬೆಂಗಳೂರಿಗೆ ಸುರ್ಜೇವಾಲ: ನಿಗಮ -ಮಂಡಳಿ ನೇಮಕ ಪಟ್ಟಿ ಇವತ್ತೇ ಅಂತಿಮ ಸಾಧ್ಯತೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದು, ನಿಗಮ -ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಕುರಿತಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಎರಡನೇ ಸುತ್ತಿನ ಸಭೆ ನಡೆಸಲಿದ್ದಾರೆ.

ಬಹುತೇಕ ಇಂದು ನಿಗಮ -ಮಂಡಳಿಗಳ ನೇಮಕಾತಿ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆ ಇದೆ. ಮಧ್ಯಾಹ್ನ 2 ಗಂಟೆಗೆ ಸುರ್ಜೇವಾಲ ಅವರು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಪಟ್ಟಿಯನ್ನು ಅಂತಿಮಗೊಳಿಸಲಿದ್ದು, ನಂತರ ಹೈಕಮಾಂಡ್ ಒಪ್ಪಿಗೆಗೆ ಸಲ್ಲಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಟ್ಟಿ ಅಂತಿಮಗೊಳಿಸಲು ಮೂವರು ನಾಯಕರು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಡಿಸೆಂಬರ್ 4 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಆರಂಭವಾಗವುದರಿಂದ ಅದಕ್ಕಿಂತ ಮೊದಲೇ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಮೊದಲ ಹಂತದಲ್ಲಿ ಶಾಸಕರಿಗೆ ಅವಕಾಶ ನೀಡಲಾಗುವುದು. ನಂತರ ಮುಖಂಡರಿಗೆ ಅವಕಾಶ ಕಲ್ಪಿಸಲು ಚರ್ಚೆ ನಡೆದಿದೆ. ಈ ನಡುವೆ ಒಟ್ಟಿಗೆ ಕಾರ್ಯಕರ್ತರು, ಮುಖಂಡರು ಹಾಗೂ ಶಾಸಕರಿಗೆ ಅವಕಾಶ ನೀಡುವ ಬಗ್ಗೆಯೂ ಚರ್ಚೆ ನಡೆದಿದ್ದು, ಇಂದೇ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular