HomeKarnatakaBIG NEWS: ಇಂದು ಬೆಳಗ್ಗೆ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ...

BIG NEWS: ಇಂದು ಬೆಳಗ್ಗೆ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಹೈಕೋರ್ಟ್ ತೀರ್ಪು ಪ್ರಕಟ

ಬೆಂಗಳೂರು: 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಲಿದೆ.

ನ್ಯಾ. ಕೆ. ಸೋಮಶೇಖರ್, ನ್ಯಾ. ಕೆ. ರಾಜೇಶ್ ರೈ ಅವರು ಇರುವ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಲಿದೆ. ಸರ್ಕಾರದ ಮೇಲ್ಮನವಿ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು.

ಹೈಕೋರ್ಟ್ ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು. ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ನಡೆ ನೀಡಿತ್ತು. ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿತ್ತು. ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ವಾದ ಪ್ರತಿವಾದ ಆಲಿಸಿದ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿತ್ತು. ಇಂದು ಬೆಳಗ್ಗೆ 10.30 ಕ್ಕೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular