ಈ ವರ್ಷದಿಂದಲೇ 9, 11ನೇ ತರಗತಿಗೂ ಬೋರ್ಡ್ ಪರೀಕ್ಷೆ

ಬೆಂಗಳೂರು: ಈ ಶೈಕ್ಷಣಿಕ ವರ್ಷದಿಂದಲೇ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶಿಸಿದೆ.

ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ 5, 8, 10 ಮತ್ತು 12ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಅದೇ ರೀತಿ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್ ಪರೀಕ್ಷೆ ನಡೆಸಲಾಗುವುದು.

9ನೇ ತರಗತಿ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಮಾಡುವಂತಿಲ್ಲ. ಸಂಕಲನಾತ್ಮಕ ಮೌಲ್ಯಮಾಪನ 2 ನಡೆಸಲಾಗುವುದು. 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಪೂರಕ ಪರೀಕ್ಷೆ ಇರಲಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read