HomeKarnatakaನಿಗಮ -ಮಂಡಳಿ ಆಕಾಂಕ್ಷಿಗಳಿಗೆ ಶುಭ ಸುದ್ದಿ: ನೇಮಕಾತಿಗೆ ಗ್ರೀನ್ ಸಿಗ್ನಲ್

ನಿಗಮ -ಮಂಡಳಿ ಆಕಾಂಕ್ಷಿಗಳಿಗೆ ಶುಭ ಸುದ್ದಿ: ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿಂದ ನಿಗಮ, ಮಂಡಳಿಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ.

ನಿಗಮ ಮಂಡಳಿ ನೇಮಕಾತಿಯಲ್ಲಿ ಶಾಸಕರಿಗೆ ಶೇಕಡ 30ರಷ್ಟು, ಪಕ್ಷದ ಕಾರ್ಯಕರ್ತರಿಗೆ ಶೇಕಡ 70ರಷ್ಟು ಮೀಸಲಿಡಲು ತೀರ್ಮಾನಿಸಲಾಗಿದೆ. 8-10 ದಿನಗಳ ಒಳಗೆ ನಿಗಮ, ಮಂಡಳಿಗಳ ನೇಮಕಾತಿ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 150 ದಿನ ಸಮೀಪಿಸುತ್ತಿದ್ದು, ಶಾಸಕರು, ಮುಖಂಡರಿಗೆ ನಿಗಮ- ಮಂಡಳಿಯಲ್ಲಿ ಅವಕಾಶ ಮಾಡಿಕೊಡುವಂತೆ ಹೈಕಮಾಂಡ್ ತಿಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮೊದಲಾದ ನಾಯಕರು ಚರ್ಚೆ ನಡೆಸಿ ನಿಗಮ ಮಂಡಳಿಗೆ ನೇಮಕಾತಿಗೆ ತೀರ್ಮಾನಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular