HomeKarnatakaಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ರಾಜ್ಯ ಸರ್ಕಾರದ ವಿವಿಧ ನಿಗಮಗಳಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ...

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ರಾಜ್ಯ ಸರ್ಕಾರದ ವಿವಿಧ ನಿಗಮಗಳಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯದ ವಿವಿಧ ನಿಗಮ, ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 31 ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಸ್ತರಣೆ ಮಾಡಿದೆ.

ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಆಹಾರ ಮತ್ತು ನಾಗರೀಕ ಸರಬರಾಜು ನಿಗಮ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಗಳಲ್ಲಿ ಖಾಲಿ ಇರುವ ಮಿಕ್ಕುಳಿದ, ವೃಂದ, ಕಲ್ಯಾಣ ಕರ್ನಾಟಕ ಪ್ರದೇಶ ಸ್ಥಳೀಯ ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೊದಲು ಜು. 22 ಅರ್ಜಿ ಸಲ್ಲಿಕೆಗೆ ಕೊನೆಯ ದಿನವೆಂದು ನಿಗದಿ ಮಾಡಲಾಗಿತ್ತು. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಜುಲೈ 31ರ ಸಂಜೆ 5.30ರವರೆಗೆ ಅರ್ಜಿ ಸಲ್ಲಿಸಲು ಅವಧಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಸ್ತರಿಸಿದೆ. ಶುಲ್ಕ ಪಾವತಿಗೆ ಆಗಸ್ಟ್ 3ರ ಮಧ್ಯಾಹ್ನ 3:30ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular