ಕಾರವಾರ: ಅರಬ್ಬಿ ಸಮುದ್ರದಲ್ಲಿ 25 ಮೀನುಗಾರರಿದ್ದ ಮೀನುಗಾರಿಕಾ ಬೋಟ್ ಮುಳುಗಡೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಭಟ್ಕಳ ತಾಲೂಕಿನ ನೇತ್ರಾಣಿ ನಡಿಗಡ್ಡೆಯಲ್ಲಿ ಪರ್ಶಿಯನ್ ಮೂಲದ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದೆ. ಅಲೆಗಳ ಅಬ್ಬರಕ್ಕೆ ಸಿಲುಕಿ ಮೀನುಗಾರಿಕಾ ಬೋಟ್ ಮಗುಚಿ ಬಿದ್ದಿದ್ದು, ಸಮುದ್ರದಲ್ಲಿ ಮುಳುಗಡೆಯಾಗಿದೆ.
ಬೋಟ್ ನಲ್ಲಿ 25 ಜನರು ಮೀನುಗಾರರಿದ್ದರು. ಕರಾವಳಿ ಕಾವಲು ಪಡೆ, ಸ್ಥಳೀಯ ಅಧಿಕಾರಿಗಳು ದೌಡಾಯುಸಿ 25 ಮೀನುಗರರ ರಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.