ಚಾಮರಾಜನಗರ: ಕೃಷಿ ಹೊಂಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಹಾಗೂ ಪುರುಷನ ಶವ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಒಡೆಯರ ಪಾಳ್ಯದಲ್ಲಿ ಘಟನೆ ನಡೆದಿದೆ.
ಮೂವರು ಮಕ್ಕಳ ತಾಯಿ ಮೀನಾಕ್ಷಿ(38), ಅವಿವಾಹಿತ ರವಿ(40) ಶವ ಪತ್ತೆಯಾಗಿದೆ. ಬೇರೆ ಬೇರೆ ಜಾತಿಯವರಾಗಿದ್ದ ಮೀನಾಕ್ಷಿ, ರವಿ ಪರಸ್ಪರ ಪ್ರೀತಿಸುತ್ತಿದ್ದ ಅನುಮಾನ ವ್ಯಕ್ತವಾಗಿದೆ. ಇದು ಕೊಲೆಯೋ, ಆತ್ಮಹತ್ಯೆಯೋ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.