ದಾವಣಗೆರೆ: ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಇಬ್ಬರು ಯುವಕರ ಮೃತದೇಹ ದಾವಣಗೆರೆಯ ಕುಂದುವಾಡ ಕೆರೆಯಲ್ಲಿ ಪತ್ತೆಯಾಗಿದೆ.
ಶಾಂತಿನಗರದ ಚೇತನ್(22), ಮನು(23) ಮೃತಪಟ್ಟವರು ಎಂದು ಹೇಳಲಾಗಿದೆ. ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದು, ಕುಟುಂಬದವರು ಹುಡುಕಾಟ ನಡೆಸಿದ್ದರು. ಮಂಗಳವಾರ ಕುಂದವಾಡ ಕೆರೆಯಲ್ಲಿ ಅವರ ಮೃತದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
