HomeKarnatakaBREAKING : ಬೆಂಗಳೂರಿನಲ್ಲಿ ಒಂದೇ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ

BREAKING : ಬೆಂಗಳೂರಿನಲ್ಲಿ ಒಂದೇ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ

ರಾಜಧಾನಿ ಬೆಂಗಳೂರಿನ ಯಲಹಂಕದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಒಂದೇ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆಯಾಗಿದ್ದು, ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತರು ನೇಪಾಳ ಮೂಲದವರಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಮೃತರನ್ನು ನೇಪಾಳ ಮೂಲದ ಸಿರ್ಜನಾ (22) ರಿತಾ (23) ಎಂದು ಗುರುತಿಸಲಾಗಿದೆ. ಬೆಂಗಳೂರು ಉತ್ತರ ವಿಭಾಗದ ಯಲಹಂಕ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಇಬ್ಬರು ಯುವತಿಯರ ಶವಗಳು ಒಂದೇ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತರನ್ನು 21 ಹಾಗೂ 22 ವರ್ಷದ ನೇಪಾಳ ಮೂಲದ ಯುವತಿಯರು ಎಂದು ಗುರುತಿಸಲಾಗಿದೆ. ಇಬ್ಬರೂ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆದರೆ ಅವರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡರು ಅಥವಾ ಈ ಸಾವಿನ ಹಿಂದೆ ಬೇರೆ ಯಾವುದೇ ಕಾರಣವಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನ (ಎಫ್‌ಎಸ್‌ಎಲ್) ತಜ್ಞರ ತಂಡ ಭೇಟಿ ನೀಡಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವತಿಯರ ಸಾವಿನ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ಕುಟುಂಬ ಸದಸ್ಯರು, ಸ್ನೇಹಿತರು ಹಾಗೂ ಪರಿಚಿತರನ್ನು ವಿಚಾರಣೆ ನಡೆಸುತ್ತಿದ್ದಾರೆ. ಆತ್ಮಹತ್ಯೆಯೋ ಅಥವಾ ಬೇರೆ ಯಾವುದೇ ಅನುಮಾನಾಸ್ಪದ ಬೆಳವಣಿಗೆಯೋ ಎಂಬ ಎಲ್ಲ ಆಯಾಮಗಳಿಂದ ತನಿಖೆ ಮುಂದುವರಿದಿದೆ. ಪೊಲೀಸರ ತನಿಖೆಯ ಬಳಿಕವೇ ಈ ಪ್ರಕರಣದ ಸಂಪೂರ್ಣ ಸತ್ಯಾಂಶ ಬೆಳಕಿಗೆ ಬರಬೇಕಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular