ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಾಕಾಲೋನಿ- ಬಾಬಳ್ಳಿ ನಡುವಿನ ಮಜ್ಜಿಗೆನಹಳ್ಳಿ ಗೊಂದಿ ನಾಲೆಯ ಬಳಿ ನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಬುಧವಾರ ರಾತ್ರಿ ಕೊಳೆತ ಸ್ಥಿತಿಯಲ್ಲಿರುವ ಮಹಿಳೆ ಮೃತದೇಹ ಪತ್ತೆಯಾಗಿದೆ. ಆದರೆ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಸುಮಾರು 35 ರಿಂದ 45 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು, ಎಫ್ಎಸ್ಎಲ್ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.