HomeKarnatakaಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಶವ ದೇಗುಲದ ಬಾವಿಯಲ್ಲಿ ಪತ್ತೆ

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಶವ ದೇಗುಲದ ಬಾವಿಯಲ್ಲಿ ಪತ್ತೆ

ಕಲಬುರಗಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ದೇವಸ್ಥಾನದ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

20 ವರ್ಷದ ಮಹಾಲಕ್ಷ್ಮಿ ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಡಿಸೆಂಬರ್ 18ರಂದು ಅವರು ಮನೆಯಿಂದ ಹೊರ ಹೋದವರು ನಾಪತ್ತೆಯಾಗಿದ್ದರು. ಮೃತದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಣಿಕೇಶ್ವರಿ ಕಾಲೋನಿಯ ಈಶ್ವರ ಉದ್ಯಾನವನದ ದೇವಸ್ಥಾನದಲ್ಲಿ ಯುವತಿ ಪ್ರತಿದಿನ ಬೆಳಗ್ಗೆ ಸ್ವಚ್ಛಗೊಳಿಸಿ ರಂಗೋಲಿ ಹಾಕಿ ಸೇವೆ ಮಾಡುತ್ತಿದ್ದರು. ಅದೇ ದೇವಸ್ಥಾನದ ಬಾವಿಯಲ್ಲಿ ಶವ ಪತ್ತೆಯಾಗಿದೆ. ಯುವತಿಯ ಸಾವಿಗೆ ಪೊಲೀಸರ ನಿರ್ಲಕ್ಷವೇ ಕಾರಣವೆಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಆಯುಕ್ತ ಆರ್. ಚೇತನ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರ್.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular