ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಶುಕ್ರವಾರ ಅಂಟು ತಯಾರಿಸುವ ಕಾರ್ಖಾನೆಯ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಂತೀಯ ರಾಜಧಾನಿ ಲಾಹೋರ್‌ನಿಂದ ಸುಮಾರು 130 ಕಿಲೋಮೀಟರ್ ದೂರದಲ್ಲಿರುವ ಫೈಸಲಾಬಾದ್ ಜಿಲ್ಲೆಯಲ್ಲಿ ಬೆಳಿಗ್ಗೆ ಈ ಘಟನೆ ಸಂಭವಿಸಿದೆ.

