ಬೆಳಗಾವಿ : ಬೆಳಗಾವಿ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಪೋಟದಲ್ಲಿ ಗಾಯಗೊಂಡಿದ್ದ ನಾಲ್ವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 7 ಕ್ಕೇರಿಕೆಯಾಗಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ನಿನ್ನೆ ಬಾಯ್ಲರ್ ಸ್ಪೋಟಗೊಂಡಿತ್ತು.
ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ನಿನ್ನೆ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಇಂದು ನಾಲ್ವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 7 ಕ್ಕೇರಿಕೆಯಾಗಿದೆ.ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಮರಕುಂಬಿ ಗ್ರಾಮದ ಬಳಿ ಇರುವ ಇನಾಮ್ ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಕ್ರಮ್ ಇನಾಮದಾರ್ ಎಂಬುವವರಿಗೆ ಸೇರಿದ ಸಕ್ಕರೆ ಕಾರ್ಖಾನೆಯಲ್ಲಿ ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬೆಳಗಾವಿ ಎಸ್ ಪಿ ರಾಮರಾಜನ್ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

