HomeKarnatakaBREAKING: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೊ ವಾಹನ: ಭೀಕರ ಅಪಘಾತದಲ್ಲಿ ಮೂವರು ಸಾವು

BREAKING: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೊ ವಾಹನ: ಭೀಕರ ಅಪಘಾತದಲ್ಲಿ ಮೂವರು ಸಾವು

ಯಾದಗಿರಿ: ಚಾಲಕನ ನಿಯಂತ್ರಣತಪ್ಪಿದ ಬೊಲೆರೊ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಡ್ನಾಳ ಬಳಿ ಈ ಅಪಘಾತ ಸಂಭವಿಸಿದೆ. ಬೊಲೆರೊ ವಾಹನದಲ್ಲಿ ಕೂಲಿ ಕೆಲಸಕ್ಕೆ ಕಾರ್ಮಿಕರು ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಮೃತರನ್ನು ಭಾಗ್ಯಶ್ರೀ(35), ಸತ್ಯಮ್ಮ(30) ಮತ್ತು ಹೊನ್ನಿಂಗಮ್ಮ(18) ಎಂದು ಗುರುತಿಸಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೊಲೆರೋ ಡಿಕ್ಕಿಯಾಗಿದೆ ಎನ್ನಲಾಗಿದ್ದು, ಅಪಘಾತದಲ್ಲಿ 8 ಕೂಲಿ ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular