HomeInternationalಬೊಲಿವಿಯಾದ ಸೇನಾ ನೆಲೆಯಲ್ಲಿ ಭಾರೀ ಸ್ಫೋಟ; 10ಕ್ಕೂ ಹೆಚ್ಚು ಮಂದಿ ಸಾವು, 58ಕ್ಕೂ ಹೆಚ್ಚು ಜನರಿಗೆ...

ಬೊಲಿವಿಯಾದ ಸೇನಾ ನೆಲೆಯಲ್ಲಿ ಭಾರೀ ಸ್ಫೋಟ; 10ಕ್ಕೂ ಹೆಚ್ಚು ಮಂದಿ ಸಾವು, 58ಕ್ಕೂ ಹೆಚ್ಚು ಜನರಿಗೆ ಗಾಯ |WATCH VIDEO

ಬೊಲಿವಿಯಾ: ಬೊಲಿವಿಯಾದ ರಾಜಧಾನಿ ಲಾ ಪಾಜ್‌ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ವಿಯಾಚಾ ಪ್ರದೇಶದ ಸೇನಾ ಬ್ಯಾರಕ್ಸ್‌ನಲ್ಲಿ ಶುಕ್ರವಾರ ಭಾರೀ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, 58ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಬೊಲಿವಿಯಾದ ವಿಯಾಚಾ ನಗರದ ಸೇನಾ ನೆಲೆಯಲ್ಲಿ ಶುಕ್ರವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಲಾ ಪಾಜ್‌ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಸೇನಾ ಬ್ಯಾರಕ್ಸ್‌ನಲ್ಲಿ ಪೈರೋಟೆಕ್ನಿಕ್ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, ಸುತ್ತಮುತ್ತಲಿನ ಮನೆಗಳಿಗೂ ಹಾನಿಯಾಗಿದೆ. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ.

ಮಧ್ಯಾಹ್ನ ಸುಮಾರು 2.30ಕ್ಕೆ (ಸ್ಥಳೀಯ ಸಮಯ) ಸೇನಾ ಸಂಕೀರ್ಣದ ಪೈರೋಟೆಕ್ನಿಕ್ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದ ವಿಭಾಗದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ರಕ್ಷಣಾ ಸಚಿವಾಲಯಕ್ಕೆ ಸೇರಿದ ಪಟಾಕಿ ಸಂಗ್ರಹದಿಂದಲೇ ಸ್ಫೋಟ ಸಂಭವಿಸಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಯಾಚಾ ಆರೋಗ್ಯ ನಿರ್ದೇಶಕಿ ರೀಟಾ ನೆಬ್ರಾಸ್ಕಾ ಸ್ಥಳೀಯ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಸಾವಿನ ಸಂಖ್ಯೆ 10ರಿಂದ 15ರ ನಡುವೆ ಇರಬಹುದು ಎಂದು ಹೇಳಿದ್ದಾರೆ. ಸುಮಾರು 62 ಮಂದಿ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಗಾಯಗೊಂಡವರ ಪೈಕಿ 14 ಮಂದಿಯನ್ನು ಲಾ ಪಾಜ್‌ನ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರಲ್ಲಿ ಮೂರನೇ ಹಂತದ ಸುಟ್ಟ ಗಾಯಗೊಂಡ ಬಾಲಕಿಯೂ ಇದ್ದಾಳೆ.

ಸ್ಫೋಟದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವು ಮನೆಗಳಿಗೂ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದ ತೀವ್ರತೆಗೆ ಹಲವು ಮನೆಗಳ ಕಿಟಕಿ ಗಾಜುಗಳು ಪುಡಿಯಾಗಿವೆ.

ಘಟನಾ ಸ್ಥಳಕ್ಕೆ ವೈದ್ಯಕೀಯ ತಂಡಗಳು, ಆಂಬ್ಯುಲೆನ್ಸ್‌ಗಳು ಹಾಗೂ ಪೊಲೀಸ್ ಸಿಬ್ಬಂದಿಯನ್ನು ರವಾನಿಸಲಾಗಿದೆ. ಗಾಯಾಳುಗಳನ್ನು ಆರೋಗ್ಯ ಕೇಂದ್ರಗಳಿಗೆ ಸ್ಥಳಾಂತರಿಸುವ ಜೊತೆಗೆ ಪರಿಸ್ಥಿತಿಯ ಪರಿಶೀಲನೆಯನ್ನೂ ಅಧಿಕಾರಿಗಳು ನಡೆಸುತ್ತಿದ್ದಾರೆ.

ಘಟನಾ ಸ್ಥಳದಲ್ಲಿ ಇನ್ನೂ ಶಾಖದ ಮೂಲವಿರುವುದರಿಂದ ಮತ್ತೊಂದು ಸ್ಫೋಟ ಸಂಭವಿಸುವ ಸಾಧ್ಯತೆ ಇದೆ ಎಂದು ಅಗ್ನಿಶಾಮಕ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಸ್ಥಳೀಯರು ಕನಿಷ್ಠ 150 ಮೀಟರ್ ದೂರದಲ್ಲೇ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಈ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ದೃಶ್ಯಗಳಲ್ಲಿ ನಗರ ಕೇಂದ್ರದಲ್ಲಿರುವ ರಕ್ಷಣಾ ನೆಲೆಯಿಂದ ದಟ್ಟವಾದ ಕಪ್ಪು ಹೊಗೆ ಮೇಲಕ್ಕೆ ಏರುತ್ತಿರುವುದು ಕಂಡುಬಂದಿದೆ.

ಸ್ಫೋಟದಿಂದ ಉಂಟಾದ ಹಾನಿಯನ್ನು ಪರಿಶೀಲಿಸಲು ಹಾಗೂ ಗಾಯಾಳುಗಳನ್ನು ಆರೋಗ್ಯ ಕೇಂದ್ರಗಳಿಗೆ ಸ್ಥಳಾಂತರಿಸಲು ಆಂಬ್ಯುಲೆನ್ಸ್‌ಗಳು, ವೈದ್ಯಕೀಯ ತಂಡಗಳು ಮತ್ತು ಪೊಲೀಸ್ ಸಿಬ್ಬಂದಿಯನ್ನು ಸೇನಾ ಸಂಕೀರ್ಣಕ್ಕೆ ನಿಯೋಜಿಸಲಾಗಿದೆ.

ಗಾಯಗೊಂಡವರ ಕುಟುಂಬಗಳಿಗೆ ರಕ್ಷಣಾ ತಂಡಗಳು ನೆರವು ನೀಡುತ್ತಿವೆ ಎಂದು ಜಸ್ಟಿನಿಯಾನೊ ತಿಳಿಸಿದ್ದಾರೆ. ಇದಕ್ಕೂ ಮುನ್ನ ಅವರ ಸಚಿವಾಲಯ ಬಿಡುಗಡೆ ಮಾಡಿದ್ದ ಹೇಳಿಕೆಯಲ್ಲಿ ಆಸ್ತಿ-ಪಾಸ್ತಿಗೆ ಹಾನಿಯಾಗಿರುವುದನ್ನು ತಿಳಿಸಲಾಗಿತ್ತು. ಆದರೆ, ಯಾರಿಗೂ ಗಾಯಗಳಾಗಿಲ್ಲ ಎಂದು ಹೇಳಲಾಗಿತ್ತು.

ಸ್ಫೋಟದ ಆಘಾತ ತರಂಗದಿಂದಾಗಿ ಹಲವು ಮನೆಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದೆ. ಘಟನಾ ಸ್ಥಳದಲ್ಲಿ ಇನ್ನೂ ಶಾಖದ ಮೂಲವಿರುವುದರಿಂದ ಮತ್ತೊಂದು ಸ್ಫೋಟ ಸಂಭವಿಸುವ ಅಪಾಯವಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ನಿವಾಸಿಗಳು ಕನಿಷ್ಠ 150 ಮೀಟರ್ ದೂರದಲ್ಲಿರುವಂತೆ ನೆಬ್ರಾಸ್ಕಾ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular