BIG NEWS: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಖ್ಯಾತ ಗಾಯಕ ಲಕ್ಕಿ ಅಲಿ ದೂರು

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಬಾಲಿವುಡ್ ಖ್ಯಾತ ಗಾಯಕ ಲಕ್ಕಿ ಅಲಿ ದೂರು ನೀಡಿದ್ದಾರೆ.

ಅಧಿಕಾರ ದುರ್ಬಳಕೆ ಮಾಡಿ ಭೂಮಿ ಕಬಳಿಕೆ ಮಾಡಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತ ಸಂಸ್ಥೆಗೆ ಗಾಯಕ ಲಕ್ಕಿ ಅಲಿ ದೂರು ನೀಡಿದ್ದಾರೆ. ಯಲಹಂಕ ನ್ಯೂಟೌನ್ ಬಳಿ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಟ್ವಿಟರ್ ನಲ್ಲಿ ಲಕ್ಕಿ ಅಲಿ ದೂರಿನ ಪ್ರತಿಯನ್ನು ಅಪ್ಲೋಡ್ ಮಾಡಿದ್ದಾರೆ. ತಮಗೆ ಸೇರಿದ ಜಾಗ ಲಪಟಾಯಿಸಿದ್ದಾರೆ ಎಂದು ಆರೋಪಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಪತಿ ಸುಧೀರ್ ರೆಡ್ಡಿ, ರೋಹಿಣಿ ಸಿಂಧೂರಿ ಬಾಮೈದ ಮಧುಸೂದನ ರೆಡ್ಡಿ ವಿರುದ್ಧ ದೂರು ನೀಡಿದ್ದಾರೆ.

ತಮ್ಮ ಟ್ರಸ್ಟ್ ಗೆ ಸಂಬಂಧಿಸಿದ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ 2022 ರಲ್ಲಿಯೇ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಗೆ ಅಲಿ ದೂರು ನೀಡಿದ್ದರು. ಯಲಹಂಕ ಎಸಿಪಿ ಮಂಜುನಾಥ್, ಭೂಮಾಪಕ ಮನೋಹರ ಶಾಮೀಲಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಲೋಕಾಯುಕ್ತಕ್ಕೆ ಕೊಟ್ಟ ದೂರನ್ನು ಡಿಜಿ ಐಜಿಪಿಗೆ ಟ್ಯಾಗ್ ಮಾಡಿದ್ದಾರೆ.

https://twitter.com/luckyali/status/1803762086457053653

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read