HomeKarnataka30ಕ್ಕೂ ಹೆಚ್ಚು ವಿಮಾನಗಳಿಗೆ ಮತ್ತೆ ಬಾಂಬ್ ಬೆದರಿಕೆ

30ಕ್ಕೂ ಹೆಚ್ಚು ವಿಮಾನಗಳಿಗೆ ಮತ್ತೆ ಬಾಂಬ್ ಬೆದರಿಕೆ

ಬೆಂಗಳೂರು: ಮುಂಬೈನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನ ಸೇರಿದಂತೆ 30ಕ್ಕೂ ಹೆಚ್ಚು ವಿಮಾನಗಳಿಗೆ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದೆ.

ಇಂಡಿಗೋ, ಏರ್ ಇಂಡಿಯಾ, ವಿಸ್ತಾರಾ ಏರ್ ಲೈನ್ಸ್ ಸೇರಿದಂತೆ 30ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ವಿಮಾನಯಾನ ಸಂಸ್ಥೆಗಳು ತಿಳಿಸಿವೆ.

ಅಕ್ಟೋಬರ್ 21ರಂದು ಕೆಲವು ವಿಸ್ತಾರಾ ವಿಮಾನಗಳಿಗೆ ಬೆದರಿಕೆ ಕರೆಗಳು ಬಂದಿದ್ದವು. ಪರಿಶೀಲನೆ ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಇದೀಗ ಇಂಡಿಗೋದ 10 ವಿಮಾನಗಳು, ವಿಸ್ತಾರಾ ಏರ್ ಲೈನ್ಸ್ ನ 10 ವಿಮಾನ ಸೇರಿದಂತೆ 30ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನ, ಮಂಗಳೂರು-ಮುಂಬೈ, ಲಕ್ನೋ-ಅಹಮದಾಬಾದ್, ಹೈದರಾಬಾದ್-ಜೆಡ್ಡಾ, ಬೆಂಗಳೂರು-ಜೆಡ್ಡಾ ವಿಮಾನಗಳಿಗೆ ಬೆದರಿಕೆ ಕರೆ ಬಂದಿದೆ ಎಂದು ತಿಳಿದುಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular