ಚಂಡೀಗಢ: ಚಂಡೀಗಢ ವಿಶ್ವವಿದ್ಯಾಲಯ ಹಾಗೂ ಮೂರು ಶಾಲೆಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.
ಚಂಡಿಗಢ ವಿಶ್ವವಿದ್ಯಾಲಯ, ಶಾಲೆಗಳು ಹಾಗೂ ಮೇಯರ್ ಕಚೇರಿ ಹಾಗೂ ಸರ್ಕಾರಿ ಕಚೇರಿಗಳಿಗೂ ಬಾಂಬ್ ಬೆದರಿಕೆ ಹಾಕಲಾಗಿದೆ. ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿಗಳು ಅಲರ್ಟ್ ಆಗಿದ್ದಾರೆ.
ಚಂಡೀಗಢ ವಿಶ್ವವಿದ್ಯಾಲಯದ ಗಾಂಧಿ ಭವನದಲ್ಲಿ 9:11 ನಿಮಿಷಕ್ಕೆ ಗ್ರೆನೇಡ್ ದಾಳಿ ನಡೆಸಿ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಬಂದುದೆ. ಅಲ್ಲದೇ ಶಿವಾಲಿಕ್ ಪಬ್ಲಿಕ್ ಸ್ಕೂಲ್, ರ್ಯಾನ್ ಇಂಟರ್ ನ್ಯಾಷನ್ ಸ್ಕೂಲ್ ಸೇರಿದಂತೆ ಮೂರು ಶಾಲೆಗಳಿಗೂ ಬಾಂಬ್ ಬೆದರಿಕೆ ಹಾಕಲಾಗಿದೆ.
ಬಾಂಬ್ ಬೆದರಿಕೆ ಸಂದೇಶ ಬೆನ್ನಲ್ಲೇ ಪೊಲೀಸರು ಹಾಗೂ ಬಾಂಬ್ ಪತ್ತೆ ದಳ, ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳದಿಂದ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

