ಭಟ್ಕಳ : ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಭಟ್ಕಳ ಪಟ್ಟಣ ಸ್ಪೋಟಿಸುವುದಾಗಿ ಇ –ಮೇಲ್ ಬಂದಿದ್ದು, ಭಟ್ಕಳ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತೀವ್ರ ಶೋಧ ನಡೆಸುತ್ತಿದ್ದಾರೆ.
ನಿನ್ನೆ ಬೆಳಗ್ಗೆ 10: 30 ಕ್ಕೆ ಭಟ್ಕಳ ಶಹರ ಪೊಲೀಸ್ ಠಾಣೆಗೆ ಇ-ಮೇಲ್ ಸಂದೇಶ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಾಂಬ್ ಇಟ್ಟು ಭಟ್ಕಳ ಪಟ್ಟಣ ಸ್ಪೋಟಿಸುವುದಾಗಿ ಇಮೇಲ್ ಬೆದರಿಕೆಯೊಡ್ಡಲಾಗಿದೆ . [email protected] ಇಮೇಲ್ ಐಡಿಯಿಂದ ಕಣ್ಣನ್ ಗುರುಸ್ವಾಮಿ ಎಂಬ ಹೆಸರಿನಲ್ಲಿ ಇ-ಮೇಲ್ ಬಂದಿದೆ.
ಕೂಡಲೇ ಅಲರ್ಟ್ ಆದ ಪೊಲೀಸರು ಕೇಸ್ ದಾಖಲಿಸಿಕೊಂಡು ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಿಕೊಂಡು ನಗರದ ಪ್ರಮುಖ ಸ್ಥಳವನ್ನು ಪರಿಶೀಲನೆ ಮಾಡಿಸುತ್ತಿದ್ದಾರೆ. ರೈಲು ನಿಲ್ದಾಣ ಹಾಗೂ ಬಸ್ ನಿಲ್ದಾಣ ಹಾಗೂ ಪ್ರಮುಖ ಬೀದಿಗಳಲ್ಲಿ ತಪಾಸಣೆ ನಡೆಸುತ್ತಿದ್ದಾರೆ.

