HomeLatest NewsBREAKING : ರಾಜ್ಯದ ಹಲವು D.C ಕಚೇರಿಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ , ತೀವ್ರ ಶೋಧ...

BREAKING : ರಾಜ್ಯದ ಹಲವು D.C ಕಚೇರಿಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ , ತೀವ್ರ ಶೋಧ |Bomb Threat

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಯಲ್ಲಿ ಡಿಸಿ ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಆತಂಕ ಸೃಷ್ಟಿಯಾಗಿದೆ.

ದಾವಣಗೆರೆ ಡಿಸಿ ಕಚೇರಿ ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಬಂದಿದೆ . ವಿಜಯಪುರ ಡಿಸಿ ಕಚೇರಿ ಸ್ಪೋಟಿಸುವುದಾಗಿ ಕೂಡ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇಂದು ಬೆಳಗ್ಗೆ 7 ಗಂಟೆಗೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರ ಅಧಿಕೃತ ಇಮೇಲ್ ಐಡಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಡಿಸಿ ಕಚೇರಿಯಲ್ಲಿ ಬಾಂಬ್ ಇಟ್ಟಿದ್ದು ಸ್ಪೋಟಗೊಳ್ಳಲಿದೆ ಎಂಬ ಸಂದೇಶ ಬಂದಿದೆ. ವಿಷಯ ತಿಳಿದ ಪೊಲೀಸರು ಕೂಡಲೇ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದ ಸಿಬ್ಬಂದಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಗಳೂರಿನ ಆರ್ ಟಿ ಒ ಕಚೇರಿಗೆ, ಗದಗ ಜಿಲ್ಲಾಡಳಿತ ಭವನ ಸ್ಪೋಟಿಸುವುದಾಗಿ ನಿನ್ನೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಆತಂಕ ಸೃಷ್ಟಿಯಾಗಿತ್ತು.ಮಂಗಳೂರಿನ ಆರ್ ಟಿ ಒ ಕಚೇರಿ ಸ್ಪೋಟಿಸುವುದಾಗಿ ಹಾಗೂ ಗದಗ ಜಿಲ್ಲಾಡಳಿತ ಭವನದಲ್ಲಿ ಬಾಂಬ್ ಸ್ಪೋಟಿಸುವುದಾಗಿ ಇಮೇಲ್ ಬಂದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ಆದರೆ ಯಾವುದೇ ಸ್ಪೋಟಕಗಳು ಪತ್ತೆಯಾಗಿರಲಿಲ್ಲ.

5 ಬಾಂಬ್ ಗಳಿಂದ ಜಿಲ್ಲಾಡಳಿತ ಭವನ ಸ್ಪೋಟಿಸುವಿದಾಗಿ ಸಂದೇಶ ಬಂದಿದ್ದು, ಸಿಬ್ಬಂದಿಗಳು ಕಂಗಾಲಾಗಿದ್ದರು. ಅರ್ನಾ ಅಶ್ವಿನ್ ಶೇಖರ್ ಎಂಬ ಇ-ಮೇಲ್ ಐಡಿಯಿಂದ ಡಿಸಿ ಕಚೇರಿ ಇಮೇಲ್-ಗೆ ಬೆದರಿಕೆ ಬಂದಿತ್ತು. ಅದೇ ರೀತಿ ಮಂಗಳೂರಿನ ‘RTO’ ಕಚೇರಿ ಸ್ಪೋಟಿಸುವುದಾಗಿ ಕೂಡ ಬೆದರಿಕೆ (Email) ಮೇಲ್ ಬಂದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular