ಬೆಂಗಳೂರು : ಬೆಂಗಳೂರಿನ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಗುರುದ್ವಾರದ ಶೌಚಾಲಯದಲ್ಲಿ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ಇಮೇಲ್ ಸಂದೇಶ ಕಳುಹಿಸಿದ್ದಾರೆ. ನಾಲ್ಕು ಆರ್ ಡಿ ಎಕ್ಸ್ ಬಾಂಬ್ ಇಟ್ಟಿರುವುದಾಗಿ ಸಂದೇಶ ಬಂದಿದೆ. ಹಲಸೂರು ಬಳಿ ಇರುವ ಗುರುಸಿಂಗ್ ಸಭಾ ಗುರುದ್ವಾರಕ್ಕೆ ಬೆದರಿಕೆ ಸಂದೇಶ ಬಂದಿದೆ. ಬೆಂಗಳೂರಿನ ಹಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

